Daniel 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
Kannada BSI Bible 2016
ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್‌ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬೆಲ್ ಸಂಸ್ಥಾನದ ದೂರಾ ಎಂಬ ಬೈಲಿನಲ್ಲಿ ನಿಲ್ಲಿಸಿದನು.
Kannada Bible (KNCL) BSI 2016
ರಾಜ ನೆಬೂಕದ್ನೆಚ್ಚರನು 27 ಮೀಟರ್ ಎತ್ತರದ 3 ಮೀಟರ್ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬಿಲೋನ್ ಸಂಸ್ಥಾನದ ‘ದೂರಾ’ ಎಂಬ ಬಯಲಿನಲ್ಲಿ ನಿಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.