Daniel 3:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರಾದರೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸದಿದ್ದರೆ ಅವರನ್ನು ಉರಿಯುವ ಬೆಂಕಿಯ ಕೊಂಡದಲ್ಲಿ ಎಸೆಯಲಾಗುವುದೆಂದು ಕೂಡ ತಾವು ಹೇಳಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.
Kannada BSI Bible 2016
ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನು ಅಡ್ಡಬಿದ್ದು ಪೂಜಿಸುವದಿಲ್ಲವೋ ಅವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.
Kannada Bible (KNCL) BSI 2016
ಯಾವನು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ತಾವು ಆಜ್ಞೆ ಮಾಡಿದಿರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಡ್ಡಬೀಳದೆ ಆರಾಧಿಸದೆ ಇರುವವರನ್ನು ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಬೇಕೆಂದು ಆಜ್ಞೆಮಾಡಿದಿಯಲ್ಲಾ?