Daniel 3:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನೇ, ಕೆಲವು ಜನ ಯೆಹೂದ್ಯರು ತಮ್ಮ ಆಜ್ಞೆಯನ್ನು ಪಾಲಿಸಲಿಲ್ಲ. ಆ ಯೆಹೂದ್ಯರನ್ನು ತಾವು ಬಾಬಿಲೋನ್ ಪ್ರಾಂತ್ಯದಲ್ಲಿ ಪ್ರಮುಖ ಅಧಿಕಾರಿಗಳನ್ನಾಗಿ ನೇಮಿಸಿದ್ದೀರಿ. ಅವರ ಹೆಸರುಗಳು, ಶದ್ರಕ್, ಮೇಶಕ್, ಅಬೇದ್‌ನೆಗೋ ಎಂದು. ಅವರು ನಿಮ್ಮ ದೇವರುಗಳನ್ನು ಪೂಜಿಸುವುದಿಲ್ಲ. ನೀವು ನಿಲ್ಲಿಸಿದ ಬಂಗಾರದ ವಿಗ್ರಹಕ್ಕೆ ಅಡ್ಡಬಿದ್ದು ಪೂಜಿಸುವದಿಲ್ಲ” ಎಂದು ಚಾಡಿ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.
Kannada BSI Bible 2016
ಈಗ ನೀನು ಬಾಬೆಲ್‌ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್‌ ಮೇಷಕ್‌ ಅಬೇದ್‌ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ; ರಾಜನೇ, ಇವರು ನಿನ್ನನ್ನು ಲಕ್ಷಿಸುವದಿಲ್ಲ, ನಿನ್ನ ದೇವರುಗಳನ್ನು ಸೇವಿಸುವದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವದಿಲ್ಲ ಎಂದು ಅರಿಕೆಮಾಡಲು
Kannada Bible (KNCL) BSI 2016
ತಾವು ಬಾಬಿಲೋನಿನ ಸಂಸ್ಥಾನಾಧಿಕಾರತ್ವವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್ ಹಾಗೂ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜರೇ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ. ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ, ನೀವು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಆಪಾದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು.