Daniel 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೆದ್‌ನೆಗೋ, ನೀವು ನನ್ನ ದೇವರುಗಳನ್ನು ಪೂಜಿಸುವುದಿಲ್ಲವಂತೆ, ಇದು ನಿಜವೇ? ನಾನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ನೀವು ಅಡ್ಡಬಿದ್ದು ಪೂಜಿಸಲಿಲ್ಲವಂತೆ, ಇದು ನಿಜವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?
Kannada BSI Bible 2016
ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್‌ ಮೇಷಕ್‌ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆ ಅವರನ್ನು ಹಿಡತರಲು ನೆಬೂಕದ್ನೆಚ್ಚರನು ಅವರಿಗೆ - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ, ನೀವು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವದು ಬೇಕೆಂದೇ ಮಾಡಿದ್ದೋ?
Kannada Bible (KNCL) BSI 2016
ಅದರಂತೆಯೇ ಅವರನ್ನು ಹಿಡಿದುತರಲಾಯಿತು. ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಹಾಗು ಅಬೇದ್‍ನೆಗೋ ಎಂಬವರೇ, ನೀವು ಬೇಕುಬೇಕೆಂದು, ನನ್ನ ದೇವರಿಗೆ ಸೇವೆಮಾಡದೆ, ನಾನು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇರುವಿರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇದ್ದೀರಿ ಎಂಬ ಮಾತು ನಿಜವೋ?