Daniel 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
Kannada BSI Bible 2016
ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
Kannada Bible (KNCL) BSI 2016
ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.