Daniel 3:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
Kannada BSI Bible 2016
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್‌ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ಕಡೆಗೆ ಬೇರೆಮಾಡಿಕೊಂಡು ಆವಿಗೆಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.
Kannada Bible (KNCL) BSI 2016
ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.