Daniel 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನು ಆ ವಿಗ್ರಹದ ಪ್ರತಿಷ್ಠಾಪನೆಯ ಮಹೋತ್ಸವಕ್ಕೆ ಉಪರಾಜರನ್ನು, ನಾಯಕರನ್ನು, ದೇಶಾಧಿಪತಿಗಳನ್ನು, ಮಂತ್ರಿಗಳನ್ನು, ಕೋಶಾಧ್ಯಕ್ಷರನ್ನು, ನ್ಯಾಯಾಧಿಪತಿಗಳನ್ನು ಮತ್ತು ಉಳಿದೆಲ್ಲ ಅಧಿಕಾರಿಗಳನ್ನು ಕರೆಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.
Kannada BSI Bible 2016
ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರನ್ನೂ ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ದೂತರನ್ನು ಕಳುಹಿಸಲು
Kannada Bible (KNCL) BSI 2016
ಬಳಿಕ ರಾಜ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ್ದ ಆ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭವನ್ನು ಏರ್ಪಡಿಸಿ, ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಸಭೆ ಸೇರಿಸುವಂತೆ ದೂತರನ್ನು ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ನೆಬೂಕದ್ನೆಚ್ಚರನು ಉಪರಾಜರನ್ನೂ ರಾಜ್ಯಪಾಲರನ್ನೂ ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಖಜಾಂಚಿದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕರೆಯಿಸಿದನು.