Daniel 3:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ನೆಬೂಕದ್ನೆಚ್ಚರನು, ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಂಧಿಸಿ ಉರಿಯುವ ಕೊಂಡದಲ್ಲಿ ಎಸೆಯಬೇಕೆಂದು ತನ್ನ ಸೈನ್ಯದಲ್ಲಿದ್ದ ಅತಿ ಬಲಶಾಲಿಗಳಾದ ಕೆಲವರಿಗೆ ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
Kannada BSI Bible 2016
ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್, ಮೇಷಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್ ಮೇಶಕ್ ಅಬೇದ್ನೆಗೋ ಎಂಬವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ಇದಲ್ಲದೆ ತನ್ನ ಸೈನ್ಯದ ಕೆಲವುಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್‍ನೆಗೋ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾದವರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.