Daniel 3:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಚೆನ್ನಾಗಿ ಬಿಗಿದುಕಟ್ಟಿ ಉರಿಯುವ ಕೊಂಡದಲ್ಲಿ ಎಸೆದರು. ಅವರು ತಮ್ಮ ಶಲ್ಯ, ಇಜಾರು, ಟೊಪ್ಪಿಗೆ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.
Kannada BSI Bible 2016
ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಂತೆ ಶಲ್ಯ ಇಜಾರು ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಿಬಿಟ್ಟರು.
Kannada Bible (KNCL) BSI 2016
ಅದರಂತೆಯೇ ಉಡಿಗೆತೊಡಿಗೆ, ಪೇಟ ಮುಂತಾದ ಬಟ್ಟೆಬರೆಗಳನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಮನುಷ್ಯರು ತಮ್ಮ ಶಲ್ಯ, ಇಜಾರು, ಮುಂಡಾಸ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡವರಾಗಿರುವಾಗ, ಧಗಧಗನೆ ಉರಿಯುವ ಬೆಂಕಿಯ ಕುಲುಮೆಯಲ್ಲಿ ಅವರನ್ನು ಹಾಕಿದರು.