Daniel 3:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದ್ದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.
Kannada BSI Bible 2016
ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್‌ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಾಗಲು ರಾಜಾಜ್ಞೆಯು ಖಂಡಿತವಾಗಿದದ್ದರಿಂದಲೂ ಆವಿಗೆಯ ಕಾವು ಅತಿತೀಕ್ಷ್ಣವಾಗಿದ್ದದರಿಂದಲೂ ಅಗ್ನಿಜ್ವಾಲೆಯು ಶದ್ರಕ್ ಮೇಶಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದವರನ್ನೇ ಸಂಹರಿಸಿತು.
Kannada Bible (KNCL) BSI 2016
ರಾಜಾಜ್ಞೆಯು ಖಡಾಖಂಡಿತವಾಗಿದ್ದರಿಂದಲೂ ಆವಿಗೆಯ ಕಾವು ಅತಿ ತೀಕ್ಷ್ಣವಾಗಿದ್ದರಿಂದಲೂ ಅಗ್ನಿಕುಂಡವು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಎತ್ತಿ ತಂದವರನ್ನೇ ಭಸ್ಮಮಾಡಿಬಿಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು.