Daniel 3:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.
Kannada BSI Bible 2016
ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವನು - ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ ಎಂದು ಹೇಳಿ
Kannada Bible (KNCL) BSI 2016
ಅದಕ್ಕೆ ಅವರು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು.