Daniel 3:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.
Kannada BSI Bible 2016
ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು.
Kannada Bible (KNCL) BSI 2016
ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ!” ಎಂದು ಹೇಳಿ ಧಗಧಗನೆ ಉರಿಯುತ್ತಿದ್ದ ಆವಿಗೆಯ ಬಾಯಿಯ ಬಳಿಗೆಹೋಗಿ, “ಪರಾತ್ಪರ ದೇವರ ದಾಸರಾದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರೇ, ಬನ್ನಿ, ಹೊರಗೆ ಬನ್ನಿ,” ಎಂದು ಕೂಗಿಕೊಂಡನು. ಅಂತೆಯೇ ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಅವರು ಬೆಂಕಿಯಿಂದ ಹೊರಟುಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.