Daniel 3:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಹೊರಗೆ ಬಂದ ಮೇಲೆ ಉಪರಾಜರು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಇತರರು ಅವರ ಸುತ್ತಲೂ ನೆರೆದರು. ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬೆಂಕಿಯು ಸುಟ್ಟಿಲ್ಲ. ಅವರ ದೇಹಕ್ಕೆ ಬೆಂಕಿಯು ಮುಟ್ಟಿಲ್ಲ. ಅವರ ಕೂದಲಿಗೂ ವಸ್ತ್ರಗಳಿಗೂ ಬೆಂಕಿಯು ತಾಕಿಲ್ಲ. ಬೆಂಕಿಯ ಸಮೀಪಕ್ಕೆ ಹೋದ ವಾಸನೆಯೂ ಅವರಿಗೆ ಮುಟ್ಟಿಲ್ಲ ಎಂಬುದನ್ನು ಅವರು ತಿಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.
Kannada BSI Bible 2016
ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಕೂಡಿದ್ದ ಉಪರಾಜ ನಾಯಕ ದೇಶಾಧಿಪತಿ ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ ಎಂದು ತಿಳಿದುಕೊಂಡರು.
Kannada Bible (KNCL) BSI 2016
ಅವರನ್ನು ನೋಡಲು ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ ಇವರೆಲ್ಲರು ಕೂಡಿಬಂದರು. ಅವರಿಗೆ ಬೆಂಕಿಯ ತಾಪವೂ ತಟ್ಟಿಲ್ಲ. ತಲೆಗೂದಲೂ ಸುಟ್ಟಿಲ್ಲ, ಅವರ ಬಟ್ಟೆಬರೆಗೆ ಏನೂ ಆಗಿಲ್ಲ, ಬೆಂಕಿಯ ವಾಸನೆಯೂ ಇಲ್ಲ, ಎಂದು ತಿಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಉಪರಾಜರು, ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು, ಎಲ್ಲರೂ ಒಟ್ಟುಗೂಡಿ ಅವರನ್ನು ಸುತ್ತುವರಿದು, ಅವರ ಶರೀರದ ಮೇಲೆ ಬೆಂಕಿಯಿಂದ ಯಾವ ಅಪಾಯವಾಗಿರದೇ ಇರುವುದನ್ನೂ, ಅವರ ತಲೆಗೂದಲುಗಳಲ್ಲಿ ಒಂದಾದರೂ ಸುಡದಿರುವುದನ್ನೂ, ಅವರ ಅಂಗಿಗಳು ನಾಶವಾಗದಿರುವುದನ್ನೂ, ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವುದನ್ನೂ ಕಂಡರು.