Daniel 3:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
Kannada BSI Bible 2016
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್‌ ಮೇಷಕ್‌ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.
Kannada Bible (KNCL) BSI 2016
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.