Daniel 3:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
Kannada BSI Bible 2016
ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಕಲ ಜನಾಂಗಕುಲಭಾಷೆಗಳವರಲ್ಲಿ ಯಾರಾದರೂ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರ ವಿಷಯದಲ್ಲಿ ಅಲ್ಲದ ಮಾತನ್ನಾಡಿದರೆ ಅವರನ್ನು ಚೂರುಚೂರಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವಲ್ಲಾ ಎಂದು ಹೇಳಿದನು.
Kannada Bible (KNCL) BSI 2016
ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.