Daniel 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೇ ನೀವು ಅಡ್ಡಬೀಳಬೇಕು. ಇದು ರಾಜಾಜ್ಞೆ. ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಬಂಗಾರದ ವಿಗ್ರಹವನ್ನು ಪೂಜಿಸಬೇಕು. ಅರಸನಾದ ನೆಬೂಕದ್ನೆಚ್ಚರನು ಈ ವಿಗ್ರಹವನ್ನು ನಿಲ್ಲಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
Kannada BSI Bible 2016
ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
Kannada Bible (KNCL) BSI 2016
ನೀವು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರರು ನಿಲ್ಲಿಸಿರುವ ಈ ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.