Daniel 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅವರು ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಿದರು. ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹವನ್ನು ಎಲ್ಲ ಜನಾಂಗಗಳ, ಭಾಷೆಗಳ ಜನರು ಪೂಜಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
Kannada BSI Bible 2016
ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ ಕುಲಭಾಷೆಗಳವರು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
Kannada Bible (KNCL) BSI 2016
ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.