Daniel 4:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡಾಗ ಕಂಡ ದೃಶ್ಯಗಳು ಇವು: ನನ್ನ ಎದುರಿಗೆ ಭೂಮಿಯ ಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವು ಇದ್ದುದನ್ನು ನಾನು ಕಂಡೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.
Kannada BSI Bible 2016
ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ - ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.
Kannada Bible (KNCL) BSI 2016
‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವು: ಇಗೋ ಭೂಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವನ್ನು ಕಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಸಿಗೆಯಲ್ಲಿ ಮಲಗಿದ್ದಾಗ ನಾನು ಕಂಡ ದರ್ಶನಗಳು: ನಾನು ನೋಡಲಾಗಿ ಭೂಮಿಯ ಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.