Daniel 4:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಮಹಾ ಧ್ವನಿಯಿಂದ, “ಮರವನ್ನು ಕಡಿದುಹಾಕಿರಿ; ಅದರ ಕೊಂಬೆಗಳನ್ನು ಕಡಿದುಹಾಕಿರಿ; ಅದರ ಎಲೆಗಳನ್ನು ಕಿತ್ತುಹಾಕಿರಿ; ಹಣ್ಣುಗಳನ್ನು ಸುತ್ತಲೂ ಉದುರಿಸಿಬಿಡಿ. ಮರದ ಕೆಳಗೆ ಇದ್ದ ಪ್ರಾಣಿಗಳು ಓಡಿಹೋಗುವವು. ಅದರ ಕೊಂಬೆಗಳಲ್ಲಿ ವಾಸವಾಗಿದ್ದ ಪಕ್ಷಿಗಳು ಹಾರಿಹೋಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!
Kannada BSI Bible 2016
ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!
Kannada Bible (KNCL) BSI 2016
ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ.