Daniel 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಮನುಷ್ಯನಂತೆ ವಿಚಾರ ಮಾಡುವುದನ್ನು ಬಿಟ್ಟು ಪ್ರಾಣಿಯಂತೆ ವಿಚಾರ ಮಾಡತೊಡಗಲಿ. ಅದು ಈ ಸ್ಥಿತಿಯಲ್ಲಿ ಏಳು ವರ್ಷವಿರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.
Kannada BSI Bible 2016
ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಮಾನುಷಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರುಷ ಕಳೆಯಲಿ.
Kannada Bible (KNCL) BSI 2016
ಅದಕ್ಕೆ ಏಳುವರ್ಷ ಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ ಏಳು ವರ್ಷಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.