Daniel 4:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
Kannada BSI Bible 2016
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.
Kannada Bible (KNCL) BSI 2016
ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’