Daniel 4:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!
Kannada BSI Bible 2016
ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!
Kannada Bible (KNCL) BSI 2016
ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: \ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.