Daniel 4:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅರಸನೇ, ನೀನು ಆಕಾಶದಿಂದ ಇಳಿದುಬರುತ್ತಿದ್ದ ಒಬ್ಬ ಪರಿಶುದ್ಧ ದೇವದೂತನನ್ನು ಕಂಡೆ. ಅವನು, ‘ಮರವನ್ನು ಕಡಿದು ನಾಶಮಾಡಿರಿ. ಅದರ ಬುಡದ ಮೋಟಿನ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಬುಡದ ಮೋಟನ್ನು ಮತ್ತು ಬೇರುಗಳನ್ನು ಭೂಮಿಯಲ್ಲಿ ಬಿಟ್ಟುಬಿಡಿ. ಅದರ ಸುತ್ತಲೂ ಕಾಡಿನ ಹುಲ್ಲು ಬೆಳೆಯಲಿ. ಅದು ಇಬ್ಬನಿಯಿಂದ ತೋಯ್ದು ಹೋಗಲಿ. ಅದು ಕಾಡುಪ್ರಾಣಿಯಂತೆ ಇರುವುದು. ಅದು ಏಳು ವರ್ಷ ಕಳೆಯುವವರೆಗೆ ಹಾಗೆಯೇ ಇರುವುದು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.
Kannada BSI Bible 2016
ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಿವಿುಷನಾದ ದೇವದೂತನು ಆಕಾಶದಿಂದಿಳಿದು - ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರುಷ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿಯು ಬರಲಿ ಎಂದು ಸಾರುವದನ್ನು ರಾಜನಾದ ನೀನು ನೋಡಿದಿಯಲ್ಲಾ;
Kannada Bible (KNCL) BSI 2016
ಕಾವಲುಗಾರನಾದ ದೂತನು ಆಕಾಶದಿಂದ ಇಳಿದುಬಂದು: ‘ಈ ಮರವನ್ನು ಕಡಿದು ಹಾಳುಮಾಡಿ. ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಹಿತ್ತಾಳೆ ಕಬ್ಬಿಣಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ. ಅಡವಿಯ ಹುಲ್ಲು ಅದರ ಸುತ್ತಲು ಬೆಳೆದಿರಲಿ, ಆಕಾಶದ ಇಬ್ಬನಿ ಅದನ್ನು ತೋಯಿಸಲಿ. ಏಳು ವರ್ಷಕಾಲ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿ ಬರಲಿ’ ಎಂದು ಸಾರುವುದನ್ನು ರಾಜರಾದ ನೀವೇ ನೋಡಿದ್ದೀರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’