Daniel 4:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮಾತುಗಳು ತಕ್ಷಣ ನೆರವೇರಿದವು. ನೆಬೂಕದ್ನೆಚ್ಚರನು ಜನರನ್ನು ಬಿಟ್ಟುಹೋಗಬೇಕಾಯಿತು. ಅವನು ಹಸುಗಳಂತೆ ಹುಲ್ಲು ತಿನ್ನತೊಡಗಿದನು. ಅವನು ಇಬ್ಬನಿಯಿಂದ ನೆನೆದನು. ಅವನ ಕೂದಲುಗಳು ಹದ್ದಿನ ಗರಿಗಳಂತೆ ಬೆಳೆದವು. ಅವನ ಉಗುರುಗಳು ಪಕ್ಷಿಗಳ ಉಗುರುಗಳಂತೆ ಬೆಳೆದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
Kannada BSI Bible 2016
ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ದನಗಳಂತೆ ಹುಲ್ಲು ಮೇಯುತ್ತಾ ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
Kannada Bible (KNCL) BSI 2016
ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದ. ದನಗಳಂತೆ ಹುಲ್ಲು ಮೇಯುತ್ತಾ ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದ. ಅವನ ಕೂದಲು ಹದ್ದುಗಳ ರೆಕ್ಕೆಗಳಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನಂತೆಯೂ ಬೆಳೆದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದನು. ದನಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ, ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೆ ಬೆಳೆಯುವವರೆಗೆ ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.