Daniel 4:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದೇವರು ನನಗೆ ಸರಿಯಾದ ಬುದ್ಧಿಯನ್ನು ಕೊಟ್ಟನು. ನನಗೆ ರಾಜನ ಗೌರವ, ಪ್ರಭಾವ, ವೈಭವಗಳು ಮತ್ತೆ ಲಭಿಸಿದವು. ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸ್ವೀಕರಿಸಿದರು. ನಾನು ಮತ್ತೆ ಅರಸನಾದೆನು. ನಾನು ಮೊದಲಿಗಿಂತಲೂ ಅಧಿಕ ಶಕ್ತಿಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನಾದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.
Kannada BSI Bible 2016
ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಓಲೈಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.
Kannada Bible (KNCL) BSI 2016
ಅದೇ ಸಮಯದಲ್ಲಿ ನನ್ನ ಬುದ್ಧಿ ನನಗೆ ಮತ್ತೆ ಸ್ವಾಧೀನವಾಯಿತು. ಘನತೆ ಗೌರವಗಳು ನನಗೆ ಮತ್ತೆ ಲಭಿಸಿದವು. ನನ್ನ ರಾಜ್ಯದ ಕೀರ್ತಿ ಬೆಳಗತೊಡಗಿತು. ನನ್ನ ಮಂತ್ರಿಗಳೂ ಪದಾಧಿಕಾರಿಗಳೂ ನನ್ನನ್ನು ಸ್ವಾಗತಿಸಲು ಬಂದರು. ರಾಜ್ಯದಲ್ಲಿ ನಾನು ನೆಲೆಗೊಂಡೆ. ಹಿಂದೆ ಇದ್ದುದಕ್ಕಿಂತಲೂ ಹೆಚ್ಚಿನ ಪ್ರತಿಭೆ ನನ್ನದಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದೇ ಸಮಯದಲ್ಲಿ ನನ್ನ ಬುದ್ಧಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ, ನನ್ನ ತೇಜಸ್ಸೂ ತಿರುಗಿ ಬಂದವು. ನನ್ನ ಆಲೋಚನಾಗಾರರೂ, ನನ್ನ ಪ್ರಭುಗಳೂ ನನ್ನನ್ನು ಹುಡುಕಿ ಬಂದರು. ನಾನು ನನ್ನ ರಾಜ್ಯದಲ್ಲಿ ಪುನಃ ನೆಲೆಗೊಂಡೆನು. ಮೊದಲಿಗಿಂತಲೂ ನನಗೆ ಹೆಚ್ಚಿನ ಪ್ರತಿಭೆ ದೊರೆಯಿತು.