Daniel 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಜನ ತಾಯಿಯು ಆ ಔತಣ ಶಾಲೆಗೆ ಬಂದಳು. ರಾಜನು ಮತ್ತು ಅವನ ಅಧಿಕಾರಿಗಳು ಆಡುತ್ತಿದ್ದ ಮಾತುಗಳನ್ನು ಕೇಳಿ ಅವಳು, “ರಾಜನೇ, ಚಿರಂಜೀವಿಯಾಗಿರು, ಭಯಪಡಬೇಡ. ಭಯದಿಂದ ನಿನ್ನ ಮುಖ ಅಷ್ಟೊಂದು ಬಿಳುಚಿಕೊಳ್ಳಲು ಬಿಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!
Kannada BSI Bible 2016
ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು - ರಾಜನೇ, ಚಿರಂಜೀವಿಯಾಗಿರು, ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!
Kannada Bible (KNCL) BSI 2016
ರಾಜನೂ ಅವನ ಸಾಮಂತರೂ ಆಡಿದ ಮಾತು ರಾಣಿಗೆ ಮುಟ್ಟಿತು. ಆಕೆ ಔತಣ ಶಾಲೆಗೆ ಬಂದು, “ರಾಜರೇ, ಚಿರಂಜೀವಿಯಾಗಿರಿ! ನಿಮ್ಮ ಮನಸ್ಸು ಕಳವಳಗೊಳ್ಳದಿರಲಿ, ನಿಮ್ಮ ಮುಖ ಕಳೆಗುಂದದಿರಲಿ! ಪರಿಶುದ್ಧ ದೇವರ ಆತ್ಮ ನೆಲೆಸಿರುವ ಒಬ್ಬ ವ್ಯಕ್ತಿ ನಿಮ್ಮ ರಾಜ್ಯದಲ್ಲಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ!