Daniel 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.
Kannada BSI Bible 2016
ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ ಜ್ಞಾನವೂ ವಿವೇಕವೂ ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ ಒಗಟುಬಿಡಿಸುವ ಚಮತ್ಕಾರವೂ ಗುಂಜುಗಂಟುಬಿಚ್ಚುವ ಚಾತುರ್ಯವೂ ತೋರಿಬಂದದರಿಂದಲೇ ಹಾಗೆ ನೇವಿುಸಿದನು. ಈಗ ಈ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು ಎಂದಳು.
Kannada Bible (KNCL) BSI 2016
ಹೌದು, ‘ಬೇಲ್ತೆಶಚ್ಚರ’ನೆಂಬ ಹೆಸರನ್ನು ರಾಜನಿಂದ ಹೊಂದಿದ ಆ ದಾನಿಯೇಲನು ಪರಮ ಬುದ್ಧಿವಂತ, ಜ್ಞಾನಿ, ವಿವೇಕಿ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನ, ಒಗಟು ಬಿಡಿಸುವ ಚಮತ್ಕಾರ, ಗುಂಜುಗಂಟು ಬಿಚ್ಚುವ ಚಾತುರ್ಯ ಅವನಲ್ಲಿ ತೋರಿಬಂದವು. ಆದ್ದರಿಂದಲೇ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಯಿತು. ದಾನಿಯೇಲನನ್ನು ಈಗಲೇ ಕರೆಯಿಸಿರಿ. ಆತ ಬರಹದ ಅರ್ಥವನ್ನು ವಿವರಿಸುವನು,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.