Daniel 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾನಿಯೇಲನನ್ನು ಅರಸನಲ್ಲಿಗೆ ಕರೆದು ತರಲಾಯಿತು. ಆಗ ರಾಜನು, “ರಾಜನಾಗಿದ್ದ ನನ್ನ ತಂದೆಯು ಯೆಹೂದದಿಂದ ಸೆರೆಹಿಡಿದು ತಂದವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ?
Kannada BSI Bible 2016
ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾನಿಯೇಲನನ್ನು ಸನ್ನಿಧಿಗೆ ಬರಮಾಡಲು ರಾಜನು ಅವನಿಗೆ - ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲೆಂಬವನು ನೀನೋ?
Kannada Bible (KNCL) BSI 2016
ಅಂತೆಯೇ, ದಾನಿಯೇಲನನ್ನು ರಾಜ ಸನ್ನಿಧಿಗೆ ಬರಮಾಡಲಾಯಿತು. ರಾಜನು ಅವನಿಗೆ: “ರಾಜನಾದ ನನ್ನ ತಂದೆ ಜುದೇಯದಿಂದ ಖೈದಿಯಾಗಿ ತಂದು ಸೆರೆಮಾಡಿದ ಯೆಹೂದ್ಯರಲ್ಲಿ ದಾನಿಯೇಲ್ ಎಂಬುವನು ನೀನೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?