Daniel 5:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.
Kannada BSI Bible 2016
ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.
Kannada Bible (KNCL) BSI 2016
ದೇವರ ಆತ್ಮ ನಿನ್ನಲ್ಲಿ ನೆಲೆಸಿದೆಯೆಂದು ನಾನು ಕೇಳಿದ್ದೇನೆ. ನಿನಗೆ ಪರಮಜ್ಞಾನ, ವಿವೇಕ, ಬುದ್ಧಿ, ತೇಜಸ್ಸು ಇದೆಯೆಂದು ನನಗೆ ತಿಳಿದುಬಂದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ, ಒಳನೋಟ, ಬುದ್ಧಿಯೂ, ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.