Daniel 5:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೋಡೆಯ ಮೇಲಿನ ಈ ಬರಹವನ್ನು ಓದಲು ಮಂತ್ರವಾದಿಗಳನ್ನು, ವಿದ್ವಾಂಸರನ್ನು ಕರೆಸಲಾಯಿತು. ಅವರು ಆ ಬರಹದ ಅರ್ಥವನ್ನು ನನಗೆ ವಿವರಿಸಬೇಕೆಂದು ನನ್ನ ಉದ್ದೇಶವಾಗಿತ್ತು. ಆದರೆ ಗೋಡೆಯ ಮೇಲಿನ ಈ ಬರಹದ ಅರ್ಥವನ್ನು ಅವರು ನನಗೆ ಹೇಳಲು ಸಾಧ್ಯವಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.
Kannada BSI Bible 2016
ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.
Kannada Bible (KNCL) BSI 2016
ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಿದೆ. ಅವರು ಇದರ ಅರ್ಥವನ್ನು ವಿವರಿಸಲಾರದೆಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.