Daniel 5:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದಾನಿಯೇಲನು ರಾಜನಿಗೆ, “ರಾಜನಾದ ಬೇಲ್ಶಚ್ಚರನೇ, ನಿನ್ನ ಕಾಣಿಕೆಗಳು ನಿನ್ನಲ್ಲಿಯೇ ಇರಲಿ ಅಥವಾ ಆ ಬಹುಮಾನಗಳನ್ನು ಬೇರೆ ಯಾರಿಗಾದರೂ ಕೊಡು. ಆದರೂ ಗೋಡೆಯ ಮೇಲಿನ ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ವಿವರಿಸುತ್ತೇನೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.
Kannada BSI Bible 2016
ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾನಿಯೇಲನು ಸನ್ನಿಧಿಯಲ್ಲಿ - ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ; ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.
Kannada Bible (KNCL) BSI 2016
ಆಗ ದಾನಿಯೇಲನು ರಾಜನಿಗೆ, “ಅರಸರೇ, ನಿಮ್ಮ ದಾನಗಳು ನಿಮಗೇ ಇರಲಿ. ನಿಮ್ಮ ಬಹುಮಾನಗಳು ಮತ್ತೊಬ್ಬನಿಗೆ ದೊರಕಲಿ. ಆದರೆ ನಾನು ಈ ಬರಹವನ್ನು ಓದಿ ಅದರ ಅರ್ಥವನ್ನು ತಮಗೆ ತಿಳಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು.