Daniel 5:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.
Kannada BSI Bible 2016
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;
Kannada Bible (KNCL) BSI 2016
ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.