Daniel 5:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
Kannada BSI Bible 2016
ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
Kannada Bible (KNCL) BSI 2016
ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.