Daniel 5:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಸ್ಥಾನದ ವಿದ್ವಾಂಸರೆಲ್ಲರೂ ಬಂದು ನೋಡಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ ಅದರ ಅರ್ಥವನ್ನು ತಿಳಿದುಕೊಳ್ಳುವುದಕ್ಕಾಗಲಿ ಅವರಿಗೆ ಆಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.
Kannada BSI Bible 2016
ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಸ್ಥಾನ ವಿದ್ವಾಂಸರೆಲ್ಲರು ಬಂದು ನೋಡಿದರು. ಆದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ರಾಜನಿಗೆ ತಿಳಿಸುವದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.
Kannada Bible (KNCL) BSI 2016
ಆಸ್ಥಾನದ ವಿದ್ವಾಂಸರೆಲ್ಲರು ಬಂದು ಸೇರಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕಾಗಲಿ ಅವರಿಂದ ಆಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು.