Daniel 6:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆ ಜನರು ಗುಂಪಾಗಿ ಹೋಗಿ ದಾನಿಯೇಲನನ್ನು ನೋಡಿದರು. ದಾನಿಯೇಲನು ದೇವರಲ್ಲಿ ಪ್ರಾರ್ಥಿಸಿ ಸಹಾಯ ಕೋರುತ್ತಿರುವದನ್ನು ಅವರು ನೋಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು.
Kannada BSI Bible 2016
ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುವದನ್ನು ಕಂಡು ಸನ್ನಿಧಿಗೆ ಬಂದು
Kannada Bible (KNCL) BSI 2016
ದಾನಿಯೇಲನ ಆ ವಿರೋಧಿಗಳು ಗುಂಪಾಗಿ ಕೂಡಿಬಂದರು. ಆತ ತನ್ನ ದೇವರಿಗೆ ಅಭಿಮುಖವಾಗಿ ಪ್ರಾರ್ಥಿಸಿ ವಿಜ್ಞಾಪಿಸುವುದನ್ನು ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಆ ಮನುಷ್ಯರೆಲ್ಲಾ ಕೂಡಿಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುತ್ತಿರುವುದನ್ನು ಕಂಡರು.