Daniel 6:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅವರು ರಾಜನಿಗೆ, “ದಾನಿಯೇಲನೆಂಬ ಆ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನ ಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.
Kannada BSI Bible 2016
ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕವರು ಸನ್ನಿಧಿಯಲ್ಲಿ - ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಪ್ರಾರ್ಥಿಸಿಕೊಳ್ಳುತ್ತಾನೆ ಎಂದು ಅರಿಕೆಮಾಡಿದರು.
Kannada Bible (KNCL) BSI 2016
ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು.