Daniel 6:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಕೇಳಿ ಅರಸನಿಗೆ ದುಃಖವೂ ವ್ಯಸನವೂ ಆಯಿತು. ದಾನಿಯೇಲನನ್ನು ರಕ್ಷಿಸಲು ಉಪಾಯವೊಂದನ್ನು ಕಂಡುಹಿಡಿಯಲು ಸಾಯಂಕಾಲದವರೆಗೆ ಯೋಚಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.
Kannada BSI Bible 2016
ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಪ್ರಯಾಸಪಟ್ಟನು.
Kannada Bible (KNCL) BSI 2016
ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡನು. ದಾನಿಯೇಲನನ್ನು ಈ ಇಕ್ಕಟ್ಟಿನಿಂದ ತಪ್ಪಿಸಲು ಮನಸ್ಸು ಮಾಡಿಕೊಂಡನು. ಆದರೆ ಹೇಗೆ ರಕ್ಷಿಸುವುದೆಂದು ಸೂರ್ಯಾಸ್ತಮದವರೆಗೂ ಆಲೋಚಿಸುತ್ತಾ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು.