Daniel 6:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೂಡಲೆ ಒಂದು ದೊಡ್ಡ ಕಲ್ಲುಬಂಡೆಯನ್ನು ತಂದು ಆ ಸಿಂಹದ ಗುಹೆಯ ಬಾಯಿಯನ್ನು ಮುಚ್ಚಿದರು. ಅರಸನು ತನ್ನ ಮುದ್ರೆಯುಂಗುರದಿಂದ ಆ ಬಂಡೆಗೆ ಮುದ್ರೆ ಹಾಕಿದನು. ಅರಸನ ಅಧಿಕಾರಗಳ ಮುದ್ರೆಯುಂಗುರಗಳಿಂದಲೂ ಸಹ ಆ ಕಲ್ಲುಬಂಡೆಗೆ ಮುದ್ರೆ ಹಾಕಲಾಯಿತು. ಇದರಿಂದಾಗಿ ಯಾರೂ ಆ ಕಲ್ಲುಬಂಡೆಯನ್ನು ಸರಿಸಿ ದಾನಿಯೇಲನನ್ನು ಆ ಸಿಂಹದ ಗುಹೆಯಿಂದ ಹೊರಗೆ ತೆಗೆಯದಂತಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.
Kannada BSI Bible 2016
ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು; ದಾನಿಯೇಲನ ಗತಿಯು ಬೇರೆಯಾಗದಂತೆ ರಾಜನು ತನ್ನ ಮುದ್ರೆಯಿಂದಲೂ ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮೊಹರುಮಾಡಿದನು.
Kannada Bible (KNCL) BSI 2016
ಆ ಅಧಿಕಾರಿಗಳಾದರೋ ಒಂದು ಬಂಡೆಯನ್ನು ತಂದು ಆ ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಗತಿಯನ್ನು ಯಾರೂ ಬದಲಾಯಿಸಲಾಗದಂತೆ ರಾಜನ ಮತ್ತು ಅವನ ಮುಖಂಡರ ಮುದ್ರೆಯನ್ನು ಅದಕ್ಕೆ ಒತ್ತಿ ಮೊಹರು ಮಾಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಹೆಯ ಬಾಯಿಯನ್ನು ಬಂಡೆಯಿಂದ ಮುಚ್ಚಲಾಯಿತು. ಇದಲ್ಲದೆ ದಾನಿಯೇಲನ ಪರಿಸ್ಥಿತಿಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನೂ, ತನ್ನ ಪ್ರಧಾನರ ಮುದ್ರೆಯನ್ನೂ ಅದಕ್ಕೆ ಹಾಕಿದನು.