Daniel 6:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ದಾರ್ಯಾವೆಷನು ಅರಮನೆಗೆ ಹಿಂತಿರುಗಿದನು. ಆ ರಾತ್ರಿ ಅರಸನು ಊಟಮಾಡಲಿಲ್ಲ. ಮನೋರಂಜನೆಗಾಗಿ ಯಾರನ್ನೂ ತನ್ನ ಹತ್ತಿರ ಬರಗೊಡಿಸಲಿಲ್ಲ. ಇಡೀ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.
Kannada BSI Bible 2016
ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ರಾಜನು ಅರಮನೆಗೆ ಹೋಗಿ ವಿನೋದ ವಾದ್ಯಗಳನ್ನು ತನ್ನ ಮುಂದೆ ತರಿಸದೆ ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆತಪ್ಪಿತು.
Kannada Bible (KNCL) BSI 2016
ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.