Daniel 6:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;
Kannada BSI Bible 2016
ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;
Kannada Bible (KNCL) BSI 2016
ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.