Daniel 6:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
Kannada BSI Bible 2016
ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದದರಿಂದ ಅವನು ವಿುಕ್ಕ ಮುಖ್ಯಾಧಿಕಾರಿಗಳಿಗಿಂತಲೂ ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು; ಅವನನ್ನು ರಾಜನು ಪೂರ್ಣರಾಜ್ಯದ ಮೇಲೆ ನೇವಿುಸಲು ಉದ್ದೇಶಿಸಿದನು.
Kannada Bible (KNCL) BSI 2016
ಈತ ಪರಮಜ್ಞಾನಿ. ಮಿಕ್ಕ ಮುಖ್ಯಾಧಿಕಾರಿಗಳಿಗಿಂತಲೂ ಅಧಿಪತಿಗಳಿಗಿಂತಲೂ ಹೆಚ್ಚು ಸಮರ್ಥನು. ಇವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.