Daniel 7:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.
Kannada BSI Bible 2016
ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಿಗೆ ಹಾಸಿಗೆಯ ಮೇಲೆ ಸ್ವಪ್ನವಾಯಿತು, ಅವನ ಮನಸ್ಸಿನಲ್ಲಿ ಕನಸುಬಿತ್ತು; ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದನು.
Kannada Bible (KNCL) BSI 2016
ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು.