Daniel 7:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ನೋಡುತ್ತಲೇ ಇದ್ದುಬಿಟ್ಟೆ. ಏಕೆಂದರೆ ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು. ಕೊನೆಗೆ ನಾಲ್ಕನೆ ಮೃಗವು ಕೊಲ್ಲಲ್ಪಟ್ಟಿತು. ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.
Kannada BSI Bible 2016
ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿಕೊಚ್ಚಿಕೊಂಡ ನಿವಿುತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.
Kannada Bible (KNCL) BSI 2016
ನಾನು ನೋಡುತ್ತಾ ಇದ್ದೆ: ಆ ಕಿರುಕೊಂಬು ಬಡಾಯಿಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನೋಡುತ್ತಿರಲು, ಆ ಕೊಂಬು ಬಡಾಯಿಕೊಚ್ಚಿಕೊಂಡದ್ದರಿಂದ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.