Daniel 7:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅವನು ನನಗೆ ಈ ರೀತಿ ವಿವರಿಸಿದನು: ‘ನಾಲ್ಕನೆಯ ಮೃಗವು ಈ ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ. ಇದು ಬೇರೆಲ್ಲ ರಾಜ್ಯಗಳಿಂದ ಭಿನ್ನವಾಗಿರುತ್ತದೆ. ಆ ನಾಲ್ಕನೆಯ ರಾಜ್ಯವು ಜಗತ್ತಿನ ಜನರನ್ನೆಲ್ಲ ನಾಶಗೊಳಿಸುವುದು. ಇದು ಜಗತ್ತಿನ ಎಲ್ಲ ರಾಷ್ಟ್ರಗಳನ್ನು ತುಳಿದು ಪುಡಿಪುಡಿ ಮಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ನನಗೆ, “ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು.
Kannada BSI Bible 2016
ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ನನಗೆ - ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ವಿುಕ್ಕ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವದು.
Kannada Bible (KNCL) BSI 2016
ಆಗ ಅವನು ನನಗೆ ಕೊಟ್ಟ ವಿವರ ಇದು: “ಆ ನಾಲ್ಕನೆಯ ಮೃಗ ಲೋಕದಲ್ಲಿ ತಲೆಯೆತ್ತುವ ನಾಲ್ಕನೆಯ ರಾಜ್ಯ. ಅದು ಮಿಕ್ಕ ರಾಜ್ಯಗಳಿಗಿಂತ ವಿಲಕ್ಷಣವಾದುದು. ಲೋಕವನ್ನೇ ಕಾಲಿನಿಂದ ತುಳಿದು ಚೂರುಚೂರು ಮಾಡಿ ಕಬಳಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಅವನು ನನಗೆ: ‘ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗುವುದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ, ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡುವಂಥಾದ್ದಾಗಿಯೂ ಇರುವುದು.