Daniel 7:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
Kannada BSI Bible 2016
ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಾತ್ಪರನಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನ ಭಕ್ತರನ್ನು ಸವೆಯಿಸಿ ಕಟ್ಟಳೆಯ ಕಾಲಗಳನ್ನೂ ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸುಮಾಡುವನು; ಆ ಭಕ್ತರು ಒಂದುಕಾಲ ಎರಡುಕಾಲ ಅರ್ಧಕಾಲ ಅವನ ಕೈವಶವಾಗಿರುವರು.
Kannada Bible (KNCL) BSI 2016
ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.