Daniel 7:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಆಮೇಲೆ ಏನಾಗಬೇಕೆಂಬುದನ್ನು ನ್ಯಾಯಸಭೆಯು ನಿರ್ಣಯಿಸುವುದು. ಆ ರಾಜನ ಅಧಿಕಾರವನ್ನು ಕಸಿದುಕೊಳ್ಳಲಾಗುವುದು. ಅವನ ಸಾಮ್ರಾಜ್ಯವು ಸಂಪೂರ್ಣವಾಗಿ ಕೊನೆಗೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.
Kannada BSI Bible 2016
ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ನ್ಯಾಯಸಭೆಯು ಕೂತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿಬಿಡುವದು.
Kannada Bible (KNCL) BSI 2016
ಆದರೆ (ದೇವರ) ನ್ಯಾಯಸಭೆ ತೀರ್ಪಿತ್ತು, ಅವನ ದೊರೆತನವನ್ನು ಕಿತ್ತು, ವಿನಾಶಮಾಡಿ, ಕೊನೆಗಾಣಿಸಿಬಿಡುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯವರೆಗೂ ಅದನ್ನು ಸಂಹರಿಸಿ ನಾಶಪಡಿಸುವುದು.