Daniel 7:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಈ ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು.
Kannada BSI Bible 2016
ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವು ಕೊಡೋಣವಾಯಿತು.
Kannada Bible (KNCL) BSI 2016
ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು.