Daniel 7:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.
Kannada BSI Bible 2016
ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಇನ್ನೊಂದು ಮೃಗ, ಎರಡನೇದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು, ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬಹು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.
Kannada Bible (KNCL) BSI 2016
ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. “ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು,” ಎಂದು ಅದಕ್ಕೆ ಹೇಳಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ, ಎರಡನೆಯ ಮೃಗವು ಕರಡಿಯ ಹಾಗಿರುವಂಥದ್ದನ್ನು ಕಂಡೆನು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿದ್ದವು. ಅದಕ್ಕೆ, ‘ಎದ್ದೇಳು, ಹೆಚ್ಚು ಮಾಂಸವನ್ನು ತಿನ್ನು,’ ಎಂದು ಹೇಳಿದರು.