Daniel 7:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು.
Kannada BSI Bible 2016
ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡೋಣವಾಯಿತು.
Kannada Bible (KNCL) BSI 2016
ಅನಂತರ ನಾನು ನೋಡುತ್ತಿರುವಾಗಲೆ ಚಿರತೆಯ ಹಾಗಿದ್ದ ಮತ್ತೊಂದು ಮೃಗ ಕಾಣಿಸಿತು. ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಗಳಂತಿರುವ ನಾಲ್ಕು ರೆಕ್ಕೆಗಳಿದ್ದವು. ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನ ಕೊಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಾದ ಮೇಲೆ ನಾನು ನೋಡಲಾಗಿ, ಚಿರತೆಯ ಹಾಗಿರುವ ಇನ್ನೊಂದು ಮೃಗವಿತ್ತು. ಇದರ ಬೆನ್ನಿನ ಮೇಲೆ ಪಕ್ಷಿಯ ರೆಕ್ಕೆಗಳು ನಾಲ್ಕು ಇವೆ. ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇವೆ. ಇದಕ್ಕೆ ಆಳುವ ಅಧಿಕಾರವು ಕೊಡಲಾಗಿತ್ತು.