Daniel 8:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಚಿಕ್ಕ ಕೊಂಬು ಅತಿ ಪ್ರಬಲವಾಯಿತು ಮತ್ತು ನಕ್ಷತ್ರಾಧಿಪತಿಯನ್ನು (ದೇವರನ್ನು) ವಿರೋಧಿಸತೊಡಗಿತು. ಆ ಚಿಕ್ಕ ಕೊಂಬು ನಕ್ಷತ್ರಾಧಿಪತಿಗೆ ನಿತ್ಯಹೋಮಗಳು ಸಲ್ಲದಂತೆ ಮಾಡಿತು. ಜನರು ನಕ್ಷತ್ರಾಧಿಪತಿಯನ್ನು ಪೂಜಿಸುವ ಸ್ಥಳವನ್ನು ಕೆಡವಿಬಿಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.
Kannada BSI Bible 2016
ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿ
Kannada Bible (KNCL) BSI 2016
ಅದು ಮಾತ್ರವಲ್ಲ, ಆ ನಕ್ಷತ್ರಗಣದ ಅಧಿಪತಿಯನ್ನೇ ಎದುರಿಸುವಷ್ಟು ಉಬ್ಬಿಹೋಗಿ ಅನುದಿನದ ಬಲಿಯರ್ಪಣೆ ಆತನಿಗೆ ಸಲ್ಲದಂತೆ ಮಾಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಯೆಹೋವ ದೇವರ ಸೈನ್ಯದ ಅಧಿಪತಿಗೆ ವಿರೋಧವಾಗಿ ಬಲಗೊಂಡು, ನಿತ್ಯ ಯಜ್ಞವನ್ನು ಯೆಹೋವ ದೇವರಿಗೆ ಸಲ್ಲದಂತೆ ಮಾಡಿ, ಅವನ ಪವಿತ್ರ ಸ್ಥಾನವನ್ನು ಕೆಡವಿ ಹಾಕಲಾಯಿತು.